ಮನೆ ರಾಜ್ಯ ರಾಜ್ಯದಲ್ಲಿ 148 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 148 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru)- ರಾಜ್ಯದಲ್ಲಿ ಕೋವಿಡ್-19 (covid) ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 148 ಹೊಸ ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,48,092ಕ್ಕೆ ಏರಿಕೆಯಾಗಿದೆ. 162 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಸದ್ಯ 1,801 ಸಕ್ರಿಯ ಪ್ರಕರಣಗಳಿದ್ದು, ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ ಸೋಂಕಿನ ಪ್ರಮಾಣ ಶೇ. 1.84 ರಷ್ಟಿದ್ದು, ಮರಣ ಪ್ರಮಾಣ ಶೇ. 1.43 ರಷ್ಟಿದೆ. ಇಂದು 8037 ಟೆಸ್ಟ್ ನಡೆಸಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 142 ಹೊಸ ಪ್ರಕರಣ ಪತ್ತೆಯಾಗಿದ್ದು, 150 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1,720 ಸಕ್ರಿಯ ಪ್ರಕರಣಗಳಿವೆ. ಬಳ್ಳಾರಿ, ಮಂಡ್ಯ ಮತ್ತು ಕೋಲಾರದಲ್ಲಿ ತಲಾ 1, ಮೈಸೂರಿನಲ್ಲಿ 3 ಪ್ರಕರಣ ಹೊರತುಪಡಿಸಿದರೆ  ಉಳಿದೆಲ್ಲಾ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. 

ಹಿಂದಿನ ಲೇಖನಆರೋಗ್ಯದಿಂದಿರಲು ಯೋಗ ಸಹಕಾರಿ
ಮುಂದಿನ ಲೇಖನರಾಜಧಾನಿಯಲ್ಲಿ ಇನ್ನು 3 ದಿನ ಮಳೆ ಸಾಧ್ಯತೆ