ಮನೆ ಸುದ್ದಿ ಜಾಲ ಹುಬ್ಬಳ್ಳಿ-ಧಾರವಾಡ: 150ಕ್ಕೂ ಹೆಚ್ಚು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಹುಬ್ಬಳ್ಳಿ-ಧಾರವಾಡ: 150ಕ್ಕೂ ಹೆಚ್ಚು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

0

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚೂ ಪೊಲೀಸರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಕೇವಲ ಒಂದೇ ವಾರದಲ್ಲಿ ಅವಳಿ ನಗರದ ಬಹುತೇಕ ಠಾಣೆಗಳ 150 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದೆ. ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಸೋಂಕಿನಿಂದ ಎದುರಾಗುತ್ತಿರುವ 3ನೇ ಅಲೆ ನಿಯಂತ್ರಿಸಲು ಜಿಲ್ಲಾ ಆಡಳಿತ ಮಂಡಳಿ ಕ್ರಮ ಕೈಗೊಳ್ಳುತ್ತಿರುವ ನಡುವಲ್ಲೇ ಪೊಲೀಸರಿಗೆ ಸೋಂಕು ತಗುಲುತ್ತಿರುವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. 

ಕಮೀಷನರೇಟ್ ವ್ಯಾಪ್ತಿಯಲ್ಲಿ 2,100 ಪೊಲೀಸ್ ಸಿಬ್ಬಂದಿಗಳಿದ್ದು, ಎಲ್ಲರಿಗೂ ಎರಡು ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ. ಅಲ್ಲದೆ, ಪೊಲೀಸರು ಮುಂಚೂಣಿಯ ಹೋರಾಟಗಾರರಾಗಿರುವುದರಿಂದ ಅವರಿಗೆ ಮುನ್ನೆಚ್ಚರಿಕೆ ಲಸಿಕೆಯನ್ನೂ ಕೂಡ ನೀಡಲಾಗುತ್ತಿದೆ. ಸೋಂಕು ಪತ್ತೆಯಾದ 150 ಮಂದಿ ಸಿಬ್ಬಂದಿಗಳ ಪೈಕಿ ಹೆಚ್ಚಿನವರು ಲಕ್ಷಣ ರಹಿತರಾಗಿದ್ದು, ಕೆಲವರಲ್ಲಿ ಮಾತ್ರ ಸೌಮ್ಯ ರೋಗ ಲಕ್ಷಣಗಳು ಕಂಡು ಬಂದಿದೆ. ಎಲ್ಲರೂ ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಲಾಭು ರಾಮ್ ಅವರು ಮಾತನಾಡಿ, ಜನವರಿ 3 ರಂದು ಒಂದೆರಡು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿತ್ತು. ಕೆಲವು ದಿನಗಳ ಬಳಿಕ ಮತ್ತಷ್ಟು ಸಿಬ್ಬಂದಿ ಪರೀಕ್ಷೆಗೊಳಗಾಗಿದ್ದರು. ಬಳಿಕ ಎಲ್ಲಾ ಸಿಬ್ಬಂದಿಗೂ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಳಾಗಿತ್ತು. ಈ ವೇಳೆ 150 ಸಿಬ್ಬಂದಿಯಲ್ಲಿ ಸೋಂಕು ಇರುವುದು ಕಂಡು ಬಂದಿತ್ತು ಎಂದು ಹೇಳಿದ್ದಾರೆ. 

ಕಳೆದ ವರ್ಷದ ಆರಂಭದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಮಯದಲ್ಲಿ, ಜಿಲ್ಲೆಯಲ್ಲಿ 100 ಪೊಲೀಸ್ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿತ್ತು. ಅವರಲ್ಲಿ ಹೆಚ್ಚಿನವರು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಇದೀಗ ಎಲ್ಲಾ ಪೊಲೀಸರಿಗೆ ಒಂದೇ ಸ್ಥಳದಲ್ಲಿ ಚಿಕಿತ್ಸೆ ನೀಡಲು ಪ್ರತ್ಯೇಕ ಕೋವಿಡ್ ಕೇರ್ ಕೇಂದ್ರವನ್ನು ಕೂಡ ಸ್ಥಾಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದಿನ ಲೇಖನದೇಶದ ಆರ್ಥಿಕತೆಗೆ ಭವಿಷ್ಯದಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಾಗಿರಲಿಗೆ : ಸಿಎಂ
ಮುಂದಿನ ಲೇಖನಕೊರೊನಾ: 2.58 ಲಕ್ಷ ಹೊಸ ಪ್ರಕರಣ ಪತ್ತೆ