ಮನೆ ರಾಜ್ಯ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್ ಆರ್ ಟಿಸಿ ನಿಗಮದಿಂದ 1500 ಹೆಚ್ಚುವರಿ ಬಸ್

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್ ಆರ್ ಟಿಸಿ ನಿಗಮದಿಂದ 1500 ಹೆಚ್ಚುವರಿ ಬಸ್

0

ಬೆಂಗಳೂರು :   ಸ್ವರ್ಣಗೌರಿ ವ್ರತ, ಗಣೇಶ ಚತುರ್ಥಿ ಹಾಗೂ  ಭಾನುವಾರದ ಕಾರಣ ಕರಾರಸಾ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟಂಬರ್ 5 ರಿಂದ 7 ರವರೆಗೆ ಬೆಂಗಳೂರಿನಿಂದ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ.

Join Our Whatsapp Group

ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆ.8ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸೌಲಭ್ಯವಿರಲಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹಾಗೂ ತಮಿಳುನಾಡು ಮತ್ತು ಕೇರಳ ಕಡೆಗೆಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಬಸ್ ಸೌಲಭ್ಯವಿರುತ್ತದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್ ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್ ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ ಗಳಿದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ ಸೈಟ್‌ ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.