ಮನೆ ರಾಜ್ಯ ರಾಜ್ಯದಲ್ಲಿ 1515 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 1515 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,151 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,95,778ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,090 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 837 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,46,484ಕ್ಕೆ ಏರಿಕೆಯಾಗಿದೆ. ಇನ್ನು 9,162 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 910 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,27,295ಕ್ಕೆ ಏರಿಕೆಯಾಗಿದೆ.


ಹಿಂದಿನ ಲೇಖನಶಿವನ ಗಾಯತ್ರಿ ಮಂತ್ರ
ಮುಂದಿನ ಲೇಖನಪುಶ್‌ ಅಪ್‌ ಮಾಡುವ ರೀತಿ, ಅನುಸರಿಸಬೇಕಾದ ಕ್ರಮ