ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,552 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,91,609ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಇದರಿಂದ ಸಾವಿನ ಸಂಖ್ಯೆ 40,090ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 1,384 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,43,444ಕ್ಕೆ ಏರಿಕೆಯಾಗಿದೆ. ಇನ್ನು 8,033 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 1,285 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,23,987ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 31 ಪ್ರಕರಣಗಳು ವರದಿಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 2,30,069 ತಲುಪಿದೆ. 16 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಗುಣಮುಖರ ಸಂಖ್ಯೆ 2,27,387ಕ್ಕೆ ಏರಿಕೆಯಾಗಿದೆ. 122 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 2,560 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಉಳಿದಂತೆ ಬೆಳಗಾವಿ 37, ಧಾರವಾಡ 35, ಕಲಬುರಗಿ 20, ಕೋಲಾರ 16, ಕೊಡಗು 15, ಬಳ್ಳಾರಿ, ಉಡುಪಿಯಲ್ಲಿ ತಲಾ 14, ಬೆಂಗಳೂರು ಗ್ರಾಮಾಂತರ 11, ದಕ್ಷಿಣಕನ್ನಡ 09, ಚಿಕ್ಕಮಗಳೂರು 08, ಚಾಮರಾಜನಗರ, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ತಲಾ 07, ಮಂಡ್ಯ 06, ದಾವಣಗೆರೆ 05, ಬಾಗಲಕೋಟೆ, ಬೀದರ್, ಚಿತ್ರದುರ್ಗ, ವಿಜಯಪುರ, ರಾಯಚೂರಿನಲ್ಲಿ ತಲಾ 03, ಗದಗ, ರಾಮನಗರ, ತುಮಕೂರಿನಲ್ಲಿ ತಲಾ 02, ಚಿಕ್ಕಬಳ್ಳಾಪುರ, ಹಾಸನ, ಹಾವೇರಿ, ಕೊಪ್ಪಳದಲ್ಲಿ ತಲಾ 01, ಯಾದಗಿರಿಯಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ.