ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,93,171ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇದರಿಂದ ಸಾವಿನ ಸಂಖ್ಯೆ 40090 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 1107 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,44,551ಕ್ಕೆ ಏರಿಕೆಯಾಗಿದೆ. ಇನ್ನು 8488 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 1244 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,25,231ಕ್ಕೆ ಏರಿಕೆಯಾಗಿದೆ.