ಮನೆ ಅಂತಾರಾಷ್ಟ್ರೀಯ ಪಾಕಿಸ್ತಾನದ ಡ್ರೋನ್ ದಾಳಿಗೆ 16 ಮಂದಿ ಅಮಾಯಕರು ಬಲಿ : ಗೃಹ ಸಚಿವಾಲಯದ ಅಧಿಕಾರಿಗಳಿಂದ ಮಾಹಿತಿ

ಪಾಕಿಸ್ತಾನದ ಡ್ರೋನ್ ದಾಳಿಗೆ 16 ಮಂದಿ ಅಮಾಯಕರು ಬಲಿ : ಗೃಹ ಸಚಿವಾಲಯದ ಅಧಿಕಾರಿಗಳಿಂದ ಮಾಹಿತಿ

0

ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಉಗ್ರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ರೀತಿಯಲ್ಲಿ ಭಾರತೀಯ ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿದ್ದು, ಇದರಿಂದ ದೇಶದ ಹಲವೆಡೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ದಾಳಿಯಲ್ಲಿ 16 ಅಮಾಯಕರು ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದ ಈ ದಾಳಿಗೆ ತಕ್ಷಣವೇ ಭಾರತೀಯ ಸೇನೆ ತಕ್ಕ ಪ್ರತಿಕ್ರಿಯೆ ನೀಡಿದ್ದು, ದಾಳಿ ಯತ್ನವನ್ನು ನಿಷ್ಪಲಗೊಳಿಸಲು ಕ್ರಮ ಕೈಗೊಂಡಿದೆ. “ಪಾಕಿಸ್ತಾನ 12 ಭಾರತೀಯ ನಗರಗಳ ಮೇಲೆ ಡ್ರೋನ್ ಮೂಲಕ ದಾಳಿ ನಡೆಸಲು ಯತ್ನಿಸಿತು. ಆದರೆ ಭದ್ರತಾ ಪಡೆಗಳು ಸುಸಜ್ಜಿತವಾಗಿದ್ದು ತಕ್ಷಣವೇ ಪ್ರತಿಯಾಗಿ ಪ್ರಹಾರ ನಡೆಸಿದವು,” ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ದಾಳಿಯಲ್ಲಿ ತೀವ್ರ ಹಾನಿ ಸಂಭವಿಸಿದ್ದು, 16 ಮಂದಿಯ ಜೀವಹಾನಿ ನಡೆದಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಹಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಸಂಪೂರ್ಣವಾಗಿ ನಾಗರಿಕರಾಗಿದ್ದು, ಯಾವುದೇ ಸೇನಾ ಗುರಿಯಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಪ್ರಕರಣದ ನಂತರ, ಕೇಂದ್ರ ಸರ್ಕಾರ ರಾಷ್ಟ್ರಮಟ್ಟದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಿದೆ. ಪ್ರಮುಖ ನಗರಗಳ ಏರ್ ಡಿಫೆನ್ಸ್ ವ್ಯವಸ್ಥೆಗಳನ್ನು ಚುರುಕುಗೊಳಿಸಲಾಗಿದೆ. ರಾಜ್ಯ ಸರ್ಕಾರಗಳಿಗೂ ಎಚ್ಚರಿಕೆ ಸೂಚನೆ ನೀಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಹಾಗೂ ಜನಸಂದಣಿ ಇರುವ ಪ್ರದೇಶಗಳಲ್ಲಿ ಗಟ್ಟಿಯಾದ ಭದ್ರತೆ ಕಲ್ಪಿಸಲಾಗಿದೆ.

ಪಾಕಿಸ್ತಾನದ ಈ ಅಕ್ರಮ ದಾಳಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗುತ್ತಿದೆ.

.