ನೆಲಮಂಗಲ : 16 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ನೆನ್ನೆ (ಶುಕ್ರವಾರ) ಸಂಜೆ 6:30ಕ್ಕೆ ಕುಸುಮಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದೆ.
ರಾಮು ಹಾಗೂ ಶೋಭಾ ದಂಪತಿಯ ಕುಸುಮಾ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಂಮಗಲ ಸರ್ಕಾರಿ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದರು.















