ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,608 ಕೋವಿಡ್ ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,22,714ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು, ಆ ಮೂಲಕ ಸಾವಿನ ಸಂಖ್ಯೆ 40,123ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ 2,068 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,71,759ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 10,790ಕ್ಕೆ ಏರಿಕೆಯಾಗಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 1,098 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,46,564ಕ್ಕೆ ಏರಿಕೆಯಾಗಿದೆ
ರಾಜ್ಯಾದ್ಯಂತ ಒಟ್ಟು 25,524 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 68,066,461ಕ್ಕೆ ಏರಿಕೆಯಾಗಿದೆ.