ಮನೆ ರಾಜ್ಯ ರಾಜ್ಯದಲ್ಲಿ 166 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 166 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 166 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,51,905ಕ್ಕೆ ಏರಿಕೆಯಾಗಿದೆ.

ಇನ್ನೂ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40064 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

101 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,09693ಕ್ಕೆ ಏರಿಕೆಯಾಗಿದೆ. ಇನ್ನು 2106 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 159 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,87,539ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಮೇ 31ರ ಹವಾಮಾನ ವರದಿ
ಮುಂದಿನ ಲೇಖನಟಿಕಾಯತ್‌ ಮೇಲೆ ಹಲ್ಲೆ ಪ್ರಕರಣ: ಮೂವರ ಬಂಧನ