ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 167 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,49,133ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40063 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
150 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,07085ಕ್ಕೆ ಏರಿಕೆಯಾಗಿದೆ. ಇನ್ನು 1943 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 156 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,84,951ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಯಾವುದೇ ಸಾವು ವರದಿಯಾಗಿಲ್ಲ.