ಮನೆ ರಾಜ್ಯ ರಾಜ್ಯದಲ್ಲಿ 1691 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 1691 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1691 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,26,085ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಆರು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40134ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1982 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3975855ಕ್ಕೆ ಏರಿಕೆಯಾಗಿದೆ. ಇನ್ನು 10054 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 1225 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1848847ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಶ್ರೀ ಲಕ್ಷ್ಮೀ ಗಾಯತ್ರೀಮಂತ್ರ ಸ್ತುತಿಃ 
ಮುಂದಿನ ಲೇಖನಮಧುಮೇಹ ನಿಯಂತ್ರಿಸುವ ಯೋಗಾಸನಗಳು