ಮನೆ ರಾಜ್ಯ ರಾಜ್ಯದಲ್ಲಿ 1,692 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 1,692 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,692 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,07,363ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,104ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1,094 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,56,112ಕ್ಕೆ ಏರಿಕೆಯಾಗಿದೆ. ಇನ್ನು 11,105 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 1,154 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,36,068ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನ​ಶಿವ ಸ್ತೋತ್ರಂ
ಮುಂದಿನ ಲೇಖನಹಿರಿಯರು ಮಾಡಬಹುದಾದ ಸರಳ ವ್ಯಾಯಾಮಗಳು