ಮನೆ ರಾಜ್ಯ ರಾಜ್ಯದಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,10,386ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40106 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1699 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,59,342ಕ್ಕೆ ಏರಿಕೆಯಾಗಿದೆ. ಇನ್ನು 10896 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 1274 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,38,334ಕ್ಕೆ ಏರಿಕೆಯಾಗಿದೆ.