ಮನೆ ರಾಜ್ಯ ರಾಜ್ಯದಲ್ಲಿ 178 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 178 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 178 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,52,280ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40065 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

206 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,10,172ಕ್ಕೆ ಏರಿಕೆಯಾಗಿದೆ. ಇನ್ನು 2001 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 158 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,87,875ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಮೈಸೂರಿಗೆ ಪ್ರಧಾನಿ ಮೋದಿ: ಯೋಗ ಕಾರ್ಯಕ್ರಮಕ್ಕೆ ಬಿಜೆಪಿ ಶಾಸಕ-ಸಂಸದರಲ್ಲೇ ಭಿನ್ನರಾಗ
ಮುಂದಿನ ಲೇಖನಲಂಚಕ್ಕೆ ಬೇಡಿಕೆ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಎಸಿಬಿ ಬಲೆಗೆ