ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,837 ಕೋವಿಡ್ ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,20,087ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 40118ಕ್ಕೆ ಏರಿಕೆಯಾಗಿದೆ. 1,290 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,68,029ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 11,898ಕ್ಕೆ ಏರಿಕೆಯಾಗಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 1137 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,44,811 ಕ್ಕೆ ಏರಿಕೆಯಾಗಿದೆ.
ರಾಜ್ಯಾದ್ಯಂತ ಒಟ್ಟು 29425 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರಿ ಕೋವಿಡ್ ಪರೀಕ್ಷೆಗಳ ಸಂಖ್ಯೆ 68024435ಕ್ಕೆ ಏರಿಕೆಯಾಗಿದೆ.