ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,837 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,31,283ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,147ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 1,017 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,80,172ಕ್ಕೆ ಏರಿಕೆಯಾಗಿದೆ. ಇನ್ನು 10,922 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 1,108 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,51,948ಕ್ಕೆ ಏರಿಕೆಯಾಗಿದೆ.