ನವದೆಹಲಿ: 2022ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಒಟ್ಟು 187 ಭಯೋತ್ಪಾದಕರನ್ನು ಹತ್ಯೆಗೈದು, 111 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಿವೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.
2022 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 125 ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಮತ್ತು 117 ಎನ್’ಕೌಂಟರ್’ಗಳು ನಡೆದಿವೆ ಎಂದು ಬುಧವಾರ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಸುಶೀಲ್ ಕುಮಾರ್ ಮೋದಿಯವರ ಲಿಖಿತ ಪ್ರಶ್ನೆಗೆ ಉತ್ತರಿಸಿದರು.
2021 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 180 ಭಯೋತ್ಪಾದಕರು ಹತ್ಯೆಯಾಗಿತ್ತು ಮತ್ತು 95 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳು ನಡೆದಿದ್ದವು. 2021 ರಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 100 ಎನ್’ಕೌಂಟರ್’ಗಳು ಮತ್ತು 129 ಭಯೋತ್ಪಾದನಾ ಕೃತ್ಯಗಳು ವರದಿಯಾಗಿವೆ ಎಂದು ಹೇಳಿದರು.