ಮನೆ ರಾಜ್ಯ ರಾಜ್ಯದಲ್ಲಿ 1,889 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 1,889 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,889 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,01,655ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,097ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1,587 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,52,381ಕ್ಕೆ ಏರಿಕೆಯಾಗಿದೆ. ಇನ್ನು 9,135 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 1,475 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,31,957ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ಹಿಂದಿನ ಲೇಖನಸರ್ವದೇವ ಕೃತ ಶ್ರೀ ಲಕ್ಷ್ಮೀ ಸ್ತೋತ್ರಂ
ಮುಂದಿನ ಲೇಖನಪಾರ್ಶ್ವವಾಯು ಅಪಾಯ ತಪ್ಪಿಸುವ ಯೋಗಾಸನಗಳು