ಮನೆ ರಾಷ್ಟ್ರೀಯ 19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ 83.50 ರೂ. ಇಳಿಕೆ

19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ 83.50 ರೂ. ಇಳಿಕೆ

0

19 ಕೆಜಿ ಎಲ್​ಪಿಜಿ ಸಿಲಿಂಡರ್​ ನ​ ಬೆಲೆ 83.50 ರೂ.ಗೆ ಇಳಿಕೆಯಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 83 ರೂ. ನಷ್ಟು ಇಳಿಕೆಯಾಗಿದೆ.

Join Our Whatsapp Group

ಈ ಹೊಸ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಆದರೆ ಈ ಬೆಲೆ ಕಡಿತ ನಿರ್ಧಾರ ಕೆಲವರಿಗೆ ಮಾತ್ರ ಅನ್ವಯಿಸುತ್ತದೆ. ವಾಣಿಜ್ಯ ಅನಿಲ ಸಿಲಿಂಡರ್‌ ಗಳಿಗೆ ಮಾತ್ರ ದರ ಇಳಿಕೆ ಅನ್ವಯವಾಗುತ್ತದೆ ಎಂದು ಕಂಪನಿಗಳು ಹೇಳಿಕೊಂಡಿವೆ. ಅಂದರೆ 14.2 ಕೆಜಿ ಗ್ಯಾಸ್ ಸಿಲಿಂಡರ್ ಬಳಸುವವರಿಗೆ ಯಾವುದೇ ಪ್ರಯೋಜನವಿಲ್ಲ.

ಏತನ್ಮಧ್ಯೆ, ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆ ಕ್ರಮೇಣ ಇಳಿಕೆಯಾಗುತ್ತಿದೆ. ಕಳೆದ ತಿಂಗಳು ಸಹ ಸಿಲಿಂಡರ್ ಬೆಲೆ 172 ರೂ.ಗೆ ಇಳಿದಿದೆ. ಮತ್ತೆ ಈಗ ಸಿಲಿಂಡರ್ ಬೆಲೆ 85 ರೂ.ನಷ್ಟು ಇಳಿಕೆಯಾಗಿದೆ. ಅಂದರೆ ಒಂದು ತಿಂಗಳೊಳಗೆ ಸಿಲಿಂಡರ್ ಬೆಲೆ 250 ರೂ.ನಷ್ಟು ಕಡಿಮೆಯಾಗಿದೆ ಎನ್ನಬಹುದು.

ಈಗಾಗಲೇ ವಾಣಿಜ್ಯ ಸಿಲಿಂಡರ್ ಬೆಲೆ 1,856.50 ರೂ. ನಷ್ಟಿತ್ತು ಅದು 1,773 ರೂ.ಗೆ ಇಳಿಕೆಯಾಗಿದೆ. ವಾಣಿಜ್ಯ ಮತ್ತು ಗೃಹಬಳಕೆಯ LPG ಸಿಲಿಂಡರ್‌ ಗಳ ಬೆಲೆಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ. ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿದೆ.