ಮನೆ ಅಪರಾಧ ಬೆಂಗಳೂರಿನಲ್ಲಿ 19 ವರ್ಷದ ಯುವಕ ಆತ್ಮಹತ್ಯೆ: ನಿಖರ ಕಾರಣ ತಿಳಿದು ಬಂದಿಲ್ಲ

ಬೆಂಗಳೂರಿನಲ್ಲಿ 19 ವರ್ಷದ ಯುವಕ ಆತ್ಮಹತ್ಯೆ: ನಿಖರ ಕಾರಣ ತಿಳಿದು ಬಂದಿಲ್ಲ

0

ಬೆಂಗಳೂರು : ಬೆಂಗಳೂರಿನಲ್ಲಿ 19 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ಸುಮಿತ್ ಬಿಕೋ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸುಮಿತ್ ಬಿಕೋ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಿತ್ ನಿನ್ನೆ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಬಂದಿದ್ದನು ಎನ್ನಲಾಗಿದೆ. ಪೊಲೀಸರು ಸುಮಿತ್ ಮೃತದೇಹವನ್ನು ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.