ನವದೆಹಲಿ (New Delhi): ದೇಶದಲ್ಲಿ ಕೋವಿಡ್-19 ಸೋಂಕು ಪ್ರಸರಣ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,673 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
45 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಆ ಪೈಕಿ 5,26,357 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,673 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, 19, 336 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟಾರೆ ಗುಣಮುಖರ ಪ್ರಮಾಣ 4, 33, 49, 778ಕ್ಕೇರಿಕೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೈನಂದಿನ ಸೋಂಕು ಸಕಾರಾತ್ಮಕ ದರ ಶೇ.4.96ರಷ್ಟಿದ್ದು, ವಾರದ ಸೋಂಕು ಸಕಾರಾತ್ಮಕ ದರ 4.88ರಷ್ಟಿದೆ. ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.33ರಷ್ಟು ಅಂದರೆ 1, 43, 676ರಷ್ಟಿದೆ.