ಬೆಂಗಳೂರು (Bengaluru)- ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 197 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,52,102ಕ್ಕೆ ಏರಿಕೆಯಾಗಿದೆ.
273 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2,029 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬಾಗಲಕೋಟೆಯಲ್ಲಿಂದು ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಇಂದು 17,716 ಟೆಸ್ಟ್ ನಡೆಸಲಾಗಿದೆ. ಸೋಂಕಿನ ಪ್ರಮಾಣ ಶೇಕಡಾ 1.11 ರಷ್ಟಿದ್ದು, ಮರಣ ಪ್ರಮಾಣ ಶೇ. 0.50 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ 178 ಹೊಸ ಪ್ರಕರಣ ಪತ್ತೆಯಾಗಿದ್ದು, 250 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಳಗಾವಿಯಲ್ಲಿ 1, ಚಿಕ್ಕಬಳ್ಳಾಪುರದಲ್ಲಿ 1, ಬೆಂಗಳೂರು ಗ್ರಾಮಾಂತರದಲ್ಲಿ 4, ದಕ್ಷಿಣ ಕನ್ನಡದಲ್ಲಿ 4, ಹಾಸನದಲ್ಲಿ 1 ಮೈಸೂರಿನಲ್ಲಿ 4, ರಾಯಚೂರು, 1, ರಾಮನಗರ 1, ಉತ್ತರ ಕನ್ನಡ 1, ವಿಜಯಪುರದಲ್ಲಿ 1 ಪ್ರಕರಣ ದೃಢಪಟ್ಟಿದೆ.