ಮನೆ ಆರೋಗ್ಯ ದೇಶದಲ್ಲಿ ಇಳಿಕೆ ಕಂಡ ಕೊರೊನಾ: ಇಂದು 2.09 ಲಕ್ಷ ಹೊಸ ಕೇಸ್ ಪತ್ತೆ

ದೇಶದಲ್ಲಿ ಇಳಿಕೆ ಕಂಡ ಕೊರೊನಾ: ಇಂದು 2.09 ಲಕ್ಷ ಹೊಸ ಕೇಸ್ ಪತ್ತೆ

0

ನವದೆಹಲಿ: ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 2,09,918 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 959 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,13,02,440ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,95,050ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268ಕ್ಕೆ ತಲುಪಿದೆ.ಈ ನಡುವೆ ಕಳೆದ 24 ಗಂಟೆಗಳಲ್ಲಿ 2,62,628 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,89,76,122ಕ್ಕೆ ತಲುಪಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,66,03,96,227 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಹಿಂದಿನ ಲೇಖನಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ: ಹೆಚ್‌ಡಿಕೆ ಭರವಸೆ
ಮುಂದಿನ ಲೇಖನಆಸ್ಟ್ರೇಲಿಯಾ ಓಪನ್: 21ನೇ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ರಾಫೆಲ್ ನಡಾಲ್