ಮನೆ ಸುದ್ದಿ ಜಾಲ ಭೀಮಾ ನದಿಗೆ 2.10 ಲಕ್ಷ ಕ್ಯೂಸೆಕ್ ನೀರು ರಿಲೀಸ್‌..!

ಭೀಮಾ ನದಿಗೆ 2.10 ಲಕ್ಷ ಕ್ಯೂಸೆಕ್ ನೀರು ರಿಲೀಸ್‌..!

0

ಕಲಬುರಗಿ : ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನಲೆ ಉಜನಿ ಜಲಾಶಯದಿಂದ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡಲಾಗಿದ್ದು, ಇದರ ಪರಿಣಾಮ ಕಲಬುರಗಿಯ ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತಗೊಂಡಿದೆ.

ಅಫಜಲಪುರದ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದ್ದು, ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ನೀರಿನ ಮಟ್ಟ ಇಳಿಯುವವರೆಗೆ ಭಕ್ತರಿಗೆ ಹಾಗೂ ಅರ್ಚಕರಿಗೆ ದೇವಸ್ಥಾನದತ್ತ ತೇರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.