ಮನೆ ಆರೋಗ್ಯ ಕೊರೋನಾ: ಭಾರತದಲ್ಲಿ 2.35 ಲಕ್ಷ ಹೊಸ ಕೇಸ್ ಪತ್ತೆ

ಕೊರೋನಾ: ಭಾರತದಲ್ಲಿ 2.35 ಲಕ್ಷ ಹೊಸ ಕೇಸ್ ಪತ್ತೆ

0

ನವದೆಹಲಿ: ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ ಶನಿವಾರ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,35,532 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 871 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,08,58,241ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,93,198ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20,04,333ಕ್ಕೆ ತಲುಪಿದೆ.ಈ ನಡುವೆ ಕಳೆದ 24 ಗಂಟೆಗಳಲ್ಲಿ 3,35,939 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,83,60,710ಕ್ಕೆ ತಲುಪಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,65,04,87,260 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಹಿಂದಿನ ಲೇಖನಯುದ್ದೋಪಕರಣ ರಫ್ತು: 375 ಮಿಲಯನ್ ಡಾಲರ್ ಒಪ್ಪಂದಕ್ಕೆ ಸಹಿ ಹಾಕಿದ ಭಾರತ-ಪಿಲಿಫೈನ್ಸ್
ಮುಂದಿನ ಲೇಖನಮಾರ್ಚ್ ವೇಳೆಗೆ ಕೆಪಿಸಿಸಿ ಪುನಾರಚನೆ , ಶೀಘ್ರದಲ್ಲೇ ಚುನಾವಣೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್