ನವದೆಹಲಿ: ಭಾರತದಲ್ಲಿ ಸತತ 4ನೇ ದಿನವೂ 3 ಲಕ್ಷಕ್ಕಿಂತ ಕಡಿಮೆ ಕೇಸು ದಾಖಲಾಗಿದ್ದು, ಶುಕ್ರವಾರ 2,51,209 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, 627 ಮಂದಿ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 40622709ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 492327ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,05,611ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,47,443 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,80,24,771ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 14,62,261 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 72,21,66,248 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.