ಮನೆ ಸುದ್ದಿ ಜಾಲ ಕೊರೊನಾ: 2.58 ಲಕ್ಷ ಹೊಸ ಪ್ರಕರಣ ಪತ್ತೆ

ಕೊರೊನಾ: 2.58 ಲಕ್ಷ ಹೊಸ ಪ್ರಕರಣ ಪತ್ತೆ

0

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,58,089 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಇದೇ ಅವಧಿಯಲ್ಲಿ 385 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,73,80,253ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,86,451ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,56,341ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,51,740 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,52,37,461ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 13,13,444 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 70,37,62,282 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಓಮಿಕ್ರಾನ್ ಸೋಂಕಿತರ ಸಂಖ್ಯೆ 8,209ಕ್ಕೆ ಏರಿಕೆ
ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈವರೆಗೂ ದೇಶಾದ್ಯಂತ 8,209 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 8,209ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.

ಹಿಂದಿನ ಲೇಖನಹುಬ್ಬಳ್ಳಿ-ಧಾರವಾಡ: 150ಕ್ಕೂ ಹೆಚ್ಚು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ
ಮುಂದಿನ ಲೇಖನಮುಂದಿನ ಕ್ರಮದ ಬಗ್ಗೆ ಶುಕ್ರವಾರದ ಸಭೆಯಲ್ಲಿ ಅಂತಿಮ ನಿರ್ಧಾರ: ಸಿಎಂ