ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಮಧ್ಯಾಹ್ನ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯಾಹ್ನ 3.36ಕ್ಕೆ 2.6 ತೀವ್ರತೆಯ ಭೂಕಂಪ ಸಂಭವಿಸಿದೆ.
ಕೇಂದ್ರಬಿಂದು ಉತ್ತರ ಜಿಲ್ಲೆಯಲ್ಲಿ ಭೂಮಿಯ ಮೇಲ್ಮೈಯಿಂದ 10 ಕಿ.ಮೀ ಕೆಳಗೆ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಕೆಲವೇ ದಿನಗಳ ಹಿಂದೆ, ಪಶ್ಚಿಮ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ, ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಕಂಪನಗಳು ಸಂಭವಿಸಿದ್ದವು.
Saval TV on YouTube