ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಗುರುವಾರ ರಾತ್ರಿ ಹಾಗೂ ಶುಕ್ರವಾರ ಬೆಳಗಿನ ಜಾವ ಭೂಕಂಪನ ಸಂಭವಿಸಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ಗುರುವಾರ ರಾತ್ರಿ 10-05 ಹಾಗೂ ಶುಕ್ರವಾರ ನಸುಕಿನ 1-47 ಕ್ಕೆ ತಿಕೋಟಾ ತಾಲೂಕಿನ ಘೋಣಸಗಿ, ಕಳ್ಳಕವಟಗಿ, ಹುಬನೂರ, ಟಕ್ಕಳಕಿ, ಸೋಮದೇವರಹಟ್ಟಿ, ಸಿದ್ದಾಪುರ ಕೆ. ಮಲಕನದೇವರಹಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಕಂಪನ ಸಂಭವಿಸಿದೆ.
ಕರ್ನಾಟಕದ ಗಡಿಯಲ್ಲಿರುವ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಈ ಗ್ರಾಮಗಳಲ್ಲಿ ಮಾತ್ರವಲ್ಲದೆ ಮಹಾರಾಷ್ಟ್ರದ ಬಿವರಗಿ, ಮೊರಬಗಿ ಗ್ರಾಮದ ಸುತ್ತಮುತ್ತಲು ಭೂಕಂಪನ ಅನುಭವ ಆಗಿದೆ.
ಶುಕ್ರವಾರ ನಸುಕಿನ 1-47 ಕ್ಕೆ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.7 ರಷ್ಟು ಪ್ರಮಾಣ ದಾಖಲಾಗಿದೆ. ಭೂಕಂಪನದ ಕೇಂದ್ರ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬಿವರಗಿ ಗ್ರಾಮದಲ್ಲಿ ಕೇಂದ್ರೀಕೃತವಾಗಿತ್ತು.