ಮನೆ ಆರೋಗ್ಯ ಕೊರೋನಾ: ದೇಶದಲ್ಲಿಂದು 2.86 ಲಕ್ಷ ಹೊಸ ಕೇಸ್ ಪತ್ತೆ

ಕೊರೋನಾ: ದೇಶದಲ್ಲಿಂದು 2.86 ಲಕ್ಷ ಹೊಸ ಕೇಸ್ ಪತ್ತೆ

0

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,86,384 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 573 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,03,71,500ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,91,700ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

Advertisement
Google search engine

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,02,472ಕ್ಕೆ ತಲುಪಿದೆ.ಈ ನಡುವೆ ಕಳೆದ 24 ಗಂಟೆಗಳಲ್ಲಿ 2,99,073 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,73,70,971ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,69,745 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 72,05,72,178 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಹಿಂದಿನ ಲೇಖನಕರಾಮುವಿವಿಗೆ ಯುಜಿಸಿಯಿಂದ ಅತ್ಯುತ್ತಮ ಶ್ರೇಣಿ ಕುರಿತು ವಿದ್ಯಾಶಂಕರ್ ಅವರಿಂದ ತಪ್ಪು ಮಾಹಿತಿ: ಆರೋಪ
ಮುಂದಿನ ಲೇಖನಕೊರೊನಾ ಇಳಿಕೆ; ಬೆಂಗಳೂರಿನಲ್ಲಿ ಶಾಲೆ ತೆರೆಯುವ ಚಿಂತನೆ: ಸಚಿವ ಬಿ.ಸಿ.ನಾಗೇಶ್