ಮನೆ ಅಪರಾಧ ವಿಜಯಪುರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ಅಧಿಕ ನಗದು ಜಪ್ತಿ; ಇಬ್ಬರು ವಶಕ್ಕೆ

ವಿಜಯಪುರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ಅಧಿಕ ನಗದು ಜಪ್ತಿ; ಇಬ್ಬರು ವಶಕ್ಕೆ

0

ವಿಜಯಪುರ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಚೆಕ್​ ಪೋಸ್ಟ್​ ನಿರ್ಮಿಸಿ ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ.

ಅದರಂತೆ ಇಂದು(ಮಾ.19)​ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ 50 ಸಾವಿರ ನಗದನ್ನು ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ಜಿಲ್ಲಾ ಸಿಇಎನ್ ಪೊಲೀಸರು ತಪಾಸಣೆ ನಡೆಸಿ ಜಪ್ತಿ ಮಾಡಿದ್ದಾರೆ.

ಜೊತೆಗೆ ಹಣದ ಸಮೇತ ಸಾಂಗ್ಲಿ ಮೂಲದ ಬಾಲಾಜಿ ನಿಕ್ಕಂ ಮತ್ತು ಸಚಿನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಹೈದ್ರಾಬಾದ್‌ ದಿಂದ ಹುಬ್ಬಳ್ಳಿಗೆ MH 01. CD 7537 ನಂಬರಿನ ಟೋಯೊಟಾ ಇನ್ನೋವಾ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ತಪಾಸಣೆ ಮಾಡಲಾಗಿದ್ದು, ಈ ವೇಳೆ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣವನ್ನು ಪೋಲಿಸರು ಜಪ್ತಿ ಮಾಡಿದ್ದಾರೆ. ಈ ಕುರಿತು ತನಿಖೆ ಮುಂದುವರೆದಿದ್ದು, ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ನಿಯೋಜಿಸಲು ಆಯೋಗಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಮುಂದಿನ ಲೇಖನನಕಲಿ ಎನ್‌ ಕೌಂಟರ್‌ ಪ್ರಕರಣ: ಮಾಜಿ ಪೊಲೀಸ್‌ ಅಧಿಕಾರಿ ಪ್ರದೀಪ್‌ ಶರ್ಮಾಗೆ ಜೀವಾವಧಿ ಶಿಕ್ಷೆ