ಮನೆ ಸುದ್ದಿ ಜಾಲ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ.ಬಿಡುಗಡೆ: ಪಿಜಿಆರ್ ಸಿಂದ್ಯ

ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ.ಬಿಡುಗಡೆ: ಪಿಜಿಆರ್ ಸಿಂದ್ಯ

0

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್

ಮಡಿಕೇರಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂದ್ಯ ಅವರು ತಿಳಿಸಿದ್ದಾರೆ.

ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದ ಸಭಾಂಗಣದಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರ ಸ್ಕೌಟ್ಸ್ ಮತ್ತು ಗೈಡ್ಸ್ ಅಭಿವೃದ್ಧಿಗಾಗಿ ಅಗತ್ಯ ಸಹಕಾರ ನೀಡುತ್ತಿದ್ದು, ಆ ನಿಟ್ಟಿನಲ್ಲಿ ಇದನ್ನು ಬಳಸಿಕೊಂಡು ಅಭಿವೃದ್ದಿಯತ್ತ ಮುನ್ನಡೆಯಬೇಕು ಎಂದು ಸಲಹೆ ಮಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸ್ಥಳೀಯ ಸಂಘಟನೆಗಳಿಗೂ ಒದಗಿಸಲಾಗುವುದು. ಆ ನಿಟ್ಟಿನಲ್ಲಿ ಖರ್ಚು ವೆಚ್ಚದ ಸಮಗ್ರ ದಾಖಲೆ ಒದಗಿಸುವಂತಾಗಬೇಕು ಎಂದು ಪಿಜಿಆರ್ ಸಿಂಧ್ಯ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು 1918 ರಲ್ಲಿಯೇ ಆರಂಭವಾಗಿದೆ. ಎಲ್ಲರ ಸಹಕಾರದಿಂದ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ ಎಂದರು.

ಜಿಲ್ಲಾಡಳಿತ ಸಹ ಸಂಪೂರ್ಣ ಸಹಕಾರ ನೀಡುತ್ತಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಭವನ ನಿರ್ಮಾಣಕ್ಕೆ ನಿರಾಪೇಕ್ಷಣಾ ಪತ್ರ ಸಹ ನೀಡಿದೆ ಎಂದು ಶ್ಲಾಘಿಸಿದರು.

ಸಮಾಜ ಸೇವೆಗೆ ಮತ್ತೊಂದು ಹೆಸರೇ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಎಂದರೆ ತಪ್ಪಾಗಲಾರದು. ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ, ಪರಿಸರ ದಿನಾಚರಣೆ, ಯೋಗ ದಿನಾಚರಣೆ, ಮಹಾತ್ಮ ಗಾಂಧಿ ಜಯಂತಿ, ಬೇಸಿಗೆ ಶಿಬಿರಗಳು, ಮಕ್ಕಳ ಮೇಳ ಹೀಗೆ ವಿವಿಧ ಕಾರ್ಯಕ್ರಮಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುವುದರ ಮೂಲಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.

ರಾಜ್ಯದಲ್ಲಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿ ತೊಡಗಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಮತ್ತಷ್ಟು ಹೆಚ್ಚಿಸುವಂತಾಗಬೇಕು. ಜೊತೆಗೆ ಶಿಕ್ಷಕರು ಸಹ ಸಹಕಾರ ನೀಡುವಂತಾಗಬೇಕು ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಬಿಡುಗಡೆ ಆಗಲಿದೆ. ಆ ನಿಟ್ಟಿನಲ್ಲಿ ಹುರುಪಿನಿಂದ ವಿವಿಧ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ಆದಿವಾಸಿ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಸಂಬಂಧ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಸಂಸ್ಥೆಯ ಸಹ ಆಯುಕ್ತ ಬಸವರಾಜ್ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮನೆ ಮನೆ ತಲುಪಬೇಕು. ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುವಂತಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಹೊಸ ಹೊಸ ಘಟಕಗಳು ಆರಂಭವಾಗಬೇಕು ಎಂದು ಸಲಹೆ ಮಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜ ಮುಖಿಯಾಗಿ ಬೆಳೆಯಲು ಸಾಧ್ಯ. ಜೊತೆಗೆ ವಿದ್ಯಾರ್ಥಿಗಳು ಹಸನ್ಮುಖಿಯಾಗಿ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿದೆ ಎಂದರು.

ರಾಜ್ಯ ಸಂಘಟಕರಾದ ಪ್ರಭಾಕರ ಭಟ್ ಅವರು ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಬೇಕು. ಪರಿಸರ ದೀಪಾವಳಿ, ವನಮಹೋತ್ಸವ, ಮಳೆ ಕೊಯ್ಲು ಹೀಗೆ ವಿವಿಧ ಚಟುವಟಿಕೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ತೊಡಗಿಸಿಕೊಂಡು ರಾಷ್ಟ್ರಮಟ್ಟದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಟಿ.ಜಿ.ಪ್ರೇಮ್ ಕುಮಾರ್ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳುವಂತಾಗಬೇಕು ಎಂದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಬಾಲಕರು ಮತ್ತು ಬಾಲಕಿಯರಿಗಾಗಿ ಸ್ವಯಂಪ್ರೇರಿತರಾಗಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವ ಶೈಕ್ಷಣಿಕ ಆಂದೋಲನವಾಗಿದ್ದು, ಜಾತಿ, ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ಬದುಕುವ ಹಾಗೂ ಸಹಬಾಳ್ವೆ ಜೀವನ ನಡೆಸುವ ಚಳುವಳಿಯಾಗಿ ರೂಪುಗೊಂಡಿದೆ. ಸ್ಕೌಟ್ಸ್, ಗೈಡ್ಸ್ ಸಂಸ್ಥೆಯು ಮಕ್ಕಳಿಗೆ ಸಮನ್ವಯದ ಬದುಕು ಕಲಿಸುತ್ತದೆ ಎಂದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜ್ಯೋತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಬಿ.ಸಿ.ದೊಡ್ಡೇಗೌಡ, ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಜಿಲ್ಲಾ ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‍ಓ) ಟಿ.ಜಿ.ಪ್ರೇಮಕುಮಾರ್, ತರಬೇತಿ ಆಯುಕ್ತರಾದ ಮೈಥಿಲಿರಾವ್, ಕೆ.ಯು.ರಂಜಿತ, ಪಿ.ಎಚ್.ಅಲೀಮ, ವಿವಿಧ ಸ್ಥಳೀಯ ಸಂಸ್ಥೆಯ ಅಧ್ಯಕ್ಷರುಗಳಾದ ಎಸ್.ಡಿ.ವಿಜೇತ( ಸೋಮವಾರಪೇಟೆ), ಹರಿಣಿ ವಿಜಯ್ (ಮಡಿಕೇರಿ), ಕಾಳಿಮಾಡ ಮೋಟಯ್ಯ( ಪೆÇನ್ನಂಪೇಟೆ), ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ, ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಕುಶಾಲನಗರ ಸಂಸ್ಥೆಯ ಉಪಾಧ್ಯಕ್ಷ ಅರುಣ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಂಪಾಜೆ ಸಂಸ್ಥೆಯ ಉಪಾಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಉμÁರಾಣಿ, ಸೋಮವಾರಪೇಟೆ ಸಂಸ್ಥೆಯ ಕಾರ್ಯದರ್ಶಿ ಜ್ಯೋತಿ, ಸೇರಿದಂತೆ ಸಂಸ್ಥೆಯ ವಿವಿಧ ಘಟಕಗಳ ಪದಾಧಿಕಾರಿಗಳು, ರೋವರ್ಸ್ ವಿದ್ಯಾರ್ಥಿಗಳು ಇದ್ದರು.

ಕೆ.ಯು.ರಂಜಿತ್ ನಿರ್ವಹಿಸಿದರು. ಕಾರ್ಯದರ್ಶಿ ಎಂ.ಎಂ.ವಸಂತಿ ವಂದಿಸಿದರು. ಇದೇ ವೇಳೆ ಸಂಸ್ಥೆಯ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಸೇರಿದಂತೆ ವಿವಿಧ ಪ್ರಶಸ್ತಿ ಪಡೆದವರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.