ಮನೆ ಹವಮಾನ ಬೆಂಗಳೂರು ಸೇರಿದಂತೆ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ 2 ದಿನ ಮಳೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ 2 ದಿನ ಮಳೆ: ಹವಾಮಾನ ಇಲಾಖೆ

0

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರದಿಂತೆ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ,ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಮುಲ್ಕಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮಾಣಿ, ಮಂಗಳೂರು, ಉಪ್ಪಿನಂಗಡಿ, ಶ್ರವಣಬೆಳಗೊಳ, ಹಾಸನದಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 13.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಹಿಂದಿನ ಲೇಖನ50-60 ಶಾಸಕರನ್ನುಬಿಜೆಪಿಗೆ ಕರೆದೊಯ್ಯಲು ಸಿದ್ದವಾದ ಪ್ರಭಾವಿ ಸಚಿವ: ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಮಾಹಿತಿ
ಮುಂದಿನ ಲೇಖನಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್