ಮನೆ ಹವಮಾನ ಮೈಸೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ 2 ದಿನ ಮಳೆ: ಹವಮಾನ ಇಲಾಖೆ

ಮೈಸೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ 2 ದಿನ ಮಳೆ: ಹವಮಾನ ಇಲಾಖೆ

0

ಬೆಂಗಳೂರು: ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ,  ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Our Whatsapp Group

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಏಪ್ರಿಲ್ 21ರಂದು ಸ್ವಲ್ಪ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ.

ಎಚ್ಎಎಲ್ ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ ನಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಲವೆಡೆ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯೊಂದಿಗೆ ಗಂಟೆಗೆ 50 ರಿಂದ 70 ಕಿಲೋಮೀಟರ್ ವೇಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.

ಇನ್ನೊಂದೆಡೆ ಉತ್ತರಾಖಂಡದ ಹವಾಮಾನದ ಪ್ರಕಾರ, ಮುಂದಿನ 72 ಗಂಟೆಗಳ ಕಾಲ ಪರ್ವತಗಳಿಂದ ಬಯಲು ಸೀಮೆಯವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಹಿಂದಿನ ಲೇಖನಹಿಂದಿ ಟ್ರಾನ್ಸ್’ಲೇಟರ್ ಪೋಸ್ಟ್ ಖಾಲಿ ಇದೆ: ಇಂದೇ ಅರ್ಜಿ ಸಲ್ಲಿಸಿ
ಮುಂದಿನ ಲೇಖನಬೆಳಗಾವಿಗೆ ಸಾಗಣೆ ಮಾಡುತ್ತಿದ್ದ ದಾಖಲೆ ಇಲ್ಲದ 1.54 ಕೋಟಿ ನಗದು ವಶ