ಮನೆ ರಾಜಕೀಯ ಕಾರು – ಟಿಟಿ ವಾಹನದ ನಡುವೆ ಭೀಕರ ಅಪಘಾತ: ಇಬ್ಬರ ಸಾವು

ಕಾರು – ಟಿಟಿ ವಾಹನದ ನಡುವೆ ಭೀಕರ ಅಪಘಾತ: ಇಬ್ಬರ ಸಾವು

0

ತುಮಕೂರು(Tumkur): ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ‌ ನಡೆದಿದೆ.

ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಡಿವೈಡರ್ ದಾಟಿ ಹಾಸನದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರು- ಟಿಟಿ ವಾಹನದ ನಡುವೆ ಭೀಕರ ಅಪಘಾತಸ್ಥಳದಲ್ಲಿ ಮತ್ತೊಂದು ಬುಲೆಟ್ ದ್ವಿಚಕ್ರ ವಾಹನ ಪತ್ತೆಯಾಗಿದ್ದು, ಬೈಕ್ ಸವಾರನ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಟಿಟಿ ವಾಹನದಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಂದಿನ ಲೇಖನನ್ಯಾಯಾಲಯಗಳು ನೀಡುವ ಮುಚ್ಚಿದ ಲಕೋಟೆ ಮಾಹಿತಿ ಎಂದರೇನು? ಅದರ ಉದ್ದೇಶವೇನು? ಇಲ್ಲಿದೆ ಮಾಹಿತಿ
ಮುಂದಿನ ಲೇಖನಬಿಎಸ್ಸಿ ಪದವಿ ಪಡೆದಿರುವ ವ್ಯಕ್ತಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಬಹುದೇ ?: ಡಾ.ಶ್ರೀನಿವಾಸ ಕಕ್ಕಿಲಾಯ