ಮನೆ ಸುದ್ದಿ ಜಾಲ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಅಡಿ 2 ಲಕ್ಷ ಅಪಘಾತ ಪರಿಹಾರ

ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಅಡಿ 2 ಲಕ್ಷ ಅಪಘಾತ ಪರಿಹಾರ

0

ಮೈಸೂರು :- ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೂಡೀಕರಿಸುವ ಉದ್ದೇಶದಿಂದ 379 ವರ್ಗಗಳ ಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ ಆಗಸ್ಟ್ 26, 2021 ರಿಂದ ಮಾರ್ಚ್ 31,2022 ರವರೆಗೆ ನೊಂದಣಿ ಮಾಡಿಕೊಂಡಿದ್ದ ಕಾರ್ಮಿಕರಲ್ಲಿ ಆಪಘಾತಕ್ಕೆ ಒಳಗಾಗಿರುವ ಕಾರ್ಮಿಕರಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮ ಯೋಜನೆ ಅಡಿಯಲ್ಲಿ 2 ಲಕ್ಷ ರೂ. ಅಪಘಾತ ಪರಿಹಾರವನ್ನು ನೀಡಲಾಗುತ್ತದೆ.

Join Our Whatsapp Group

ಅಪಘಾತದಿಂದ ಮರಣ ಹೊಂದಿರುವ ಕಾರ್ಮಿಕ ಫಲಾನುಭವಿಗಳ ಆಧಾರ್ ಕಾರ್ಡ್ ಸಂಖ್ಯೆ, ಇ-ಶ್ರಮ್ ಕಾರ್ಡ್ ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ದಾಖಲೆಗಳನ್ನು ಸಲ್ಲಿಸಿ ಯೋಜನೆಯ ಪರಿಹಾರವನ್ನು ಪಡೆದುಕೊಳ್ಳಬಹುದಾಗಿದೆ.ಅಪಘಾತದಿಂದ ಅಂಗವೈಕಲ್ಯ ಹೊಂದಿರುವ ಫಲಾನುಭವಿಗಳು ಆಧಾರ್ ಕಾರ್ಡ್ ಸಂಖ್ಯೆ , ಇ-ಶ್ರಮ್ ಕಾರ್ಡ್ ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವಿಕಲತೆವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶವನ್ನು ಒಳಗೊಂಡಿರುವ ಆಸ್ಪತ್ರೆಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಫಲಾನುಭವಿಗಳು ಸೂಕ್ತ ದಾಖಲೆಗಳೊಂದಿಗೆ ಮೈಸೂರಿನ ಕುವೆಂಪು ನಗರದ ನ್ಯೂ ಕಾಂತರಾಜ್ ರಸ್ತೆಯಲ್ಲಿರುವ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬoಧಿತ ತಾಲೂಕು ಕಾರ್ಮಿಕ ಅಧಿಕಾರಿಗಳ ಕಚೇರಿ ಅಥವಾ ದೂರವಾಣಿ ಸಂಖ್ಯೆ 0821-2343990 ಸಂಪರ್ಕಿಸಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀ ರಾಜೇಶ್.ಕೆ.ಜಾದವ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.