ಹಾಸನ (ಅರಸೀಕೆರೆ): ನಮ್ಮ ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದರೆ ರೈತರ ಮಕ್ಕಳನ್ನ ಮದುವೆಯಾಗುವ ಯುವತಿಯರಿಗೆ ಎರಡು ಲಕ್ಷ ರೂ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಪಂಚರತ್ನ ಯಾತ್ರೆ ಸಮಾವೇಶದಲ್ಲಿ ಅವರು ಮಾತನಾಡುತ್ತಾ, ನಮ್ಮದು ರೈತರ ಪಕ್ಷ. ಪ್ರಾದೇಶಿಕ ಪಕ್ಷ ಇಲ್ಲದೇ ಒಂದು ರಾಜ್ಯ ಅಭಿವೃದ್ಧಿ ಆಗಲು ಸಾಧ್ಯವಿಲ್ಲ ಎಂದರು.
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಯಾರೂ ಮುಂದೆ ಬರುತ್ತಿಲ್ಲ. ಕಂಕಣ ಭಾಗ್ಯ ಕೂಡಿ ಬರಲಿ ಅಂತ ಅವಿವಾಹಿತ ರೈತ ಸಮುದಾಯದ ಯುವಕರು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡಿದ್ದನ್ನು ನಾನು ಗಮನಿಸಿದ್ದೇನೆ. ರೈತರು ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ನಮ್ಮ ಪಂಚರತ್ನ ರಥಯಾತ್ರೆಯ ಪ್ರಣಾಳಿಕೆಯಲ್ಲಿ ಈ ವಿಚಾರವನ್ನು ಸೇರ್ಪಡೆ ಮಾಡಿದ್ದು, ರೈತರ ಮಕ್ಕಳನ್ನ ಮದುವೆಯಾಗುವ ಯುವತಿಯರಿಗೆ 2 ಲಕ್ಷ ಪ್ರೋತ್ಸಾಹ ಧನ ನೀಡುವ ಮಹತ್ವದ ಯೋಜನೆಯನ್ನು ಜಾರಿಗೊಳಿಸುತ್ತೇನೆ ಎಂದು ಹೇಳಿದರು.














