ಮನೆ ರಾಜಕೀಯ ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕು: ಶಾಸಕರಿಗೆ ಡಿ.ಕೆ.ಶಿವಕುಮಾರ್ ಸಲಹೆ

ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕು: ಶಾಸಕರಿಗೆ ಡಿ.ಕೆ.ಶಿವಕುಮಾರ್ ಸಲಹೆ

0

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಸುಮ್ಮನೆ ಕೂರುವಂತಿಲ್ಲ, ಮುಂದಿನ ಲೋಕಸಭೆ ಚುನಾವಣೆ ಯಲ್ಲಿ 20 ಸ್ಥಾನ ಗೆಲ್ಲಬೇಕು ಎಂದು ಡಿಕೆ ಶಿವಕುಮಾರ್ ಶಾಸಕರಿಗೆ ಸಲಹೆ ನೀಡಿದ್ದಾರೆ.

Join Our Whatsapp Group

ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಿತು.

ಇದಷ್ಟೇ ಅಲ್ಲ, ಬಿಬಿಎಂಪಿ ಚುನಾವಣೆಯಲ್ಲೂ ವಿಜಯ ಸಾಧಿಸಬೇಕು. ಜಿಲ್ಲಾ ಸಚಿವರು ಆಗುವವರು ಪ್ರತಿ ಜಿಲ್ಲೆಯಲ್ಲಿ ಹಾಗೂ ಶಾಸಕರು ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಪಕ್ಷದ ಕಚೇರಿ ಸ್ಥಾಪಿಸಲೇಬೇಕು. ನಮಗೆ ಪಕ್ಷದ ಕಚೇರಿಯೇ ದೇಗುಲ. ಅದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.

ಎಲ್ಲರಿಗೂ ಅಧಿಕಾರ ಸಿಗದಿರಬಹುದು. ಆದರೆ ನಿಮ್ಮ ಶ್ರಮಕ್ಕೆ ಗೌರವ ಸಿಗುತ್ತದೆ. ಪಕ್ಷದ ಕೆಲಸವನ್ನು ದೇವರ ಕೆಲಸ ಎಂದು ಮಾಡಬೇಕು. ಚುನಾವಣೆಯಲ್ಲಿ ನಿಮ್ಮ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರನ್ನು ಮರೆಯಬಾರದು. ರಾಜ್ಯದ ಜನರಿಗೆ ಸ್ವಚ್ಛ ಆಡಳಿತ ನೀಡಲು ಸಹಕರಿಸಬೇಕು. ಮೈಯೆಲ್ಲಾ ಕಣ್ಣಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಹಿಂದಿನ ಲೇಖನಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ: ಹವಮಾನ ಇಲಾಖೆ
ಮುಂದಿನ ಲೇಖನಬಾದಾಮಿಯಿಂದ ನಮ್ಮ ದೇಹಕ್ಕಾಗುವ ಐದು ಪ್ರಮುಖ ಆರೋಗ್ಯ ಪ್ರಯೋಜನಗಳು