ಮನೆ ಕಾನೂನು 2008ರ ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣ​: 28 ಆರೋಪಿಗಳು ಖುಲಾಸೆ

2008ರ ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣ​: 28 ಆರೋಪಿಗಳು ಖುಲಾಸೆ

0

ಗುಜರಾತ್​: 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 28 ಆರೋಪಿಗಳನ್ನು ಖುಲಾಸೆಗೊಳಿಸಿ ಗುಜರಾತ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದಲ್ಲಿ ನ್ಯಾಯಾಧೀಶ ಎ.ಆರ್. ಪಟೇಲ್ ಅವರು ಒಟ್ಟು 77 ಆರೋಪಿಗಳ ಪೈಕಿ 28 ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ. ಹೀಗಾಗಿ ಒಟ್ಟು 77 ಮಂದಿಯಲ್ಲಿ 49 ಮಂದಿಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಘಟನೆ ಹಿನ್ನೆಲೆ:  ಜುಲೈ 26, 2008 ರಂದು 70 ನಿಮಿಷಗಳ ಅವಧಿಯಲ್ಲಿ ಅಹಮದಾಬಾದ್ ನಗರದಲ್ಲಿ 21 ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಘಟನೆಯಲ್ಲಿ ಬರೋಬ್ಬರಿ 56 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ ಸಂಘಟನೆಯ ಒಂದು ಬಣವಾದ ಇಂಡಿಯನ್ ಮುಜಾಹಿದೀನ್ (ಐಎಂ) ಭಯೋತ್ಪಾದಕ ಸಂಘಟನೆ ಕೃತ್ಯ ಎಸಗಿತ್ತು.

ಹಿಂದಿನ ಲೇಖನಯುಪಿ ಚುನಾವಣೆ: ಯೋಗಿ- ಕೇಜ್ರಿವಾಲ್ ಟ್ವೀಟ್ ವಾರ್!
ಮುಂದಿನ ಲೇಖನಕಾಂಗ್ರೆಸ್ ನಿಂದ ವಿದ್ಯಾರ್ಥಿಗಳ ಮನಸ್ಸಲ್ಲಿ ವಿಷ ಬೀಜ ಬಿತ್ತುವ ಕೆಲಸ: ಬಿ.ವೈ.ವಿಜಯೇಂದ್ರ