ಮನೆ ರಾಜ್ಯ 2015- 16ರ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಬಿ.ಸಿ.ನಾಗೇಶ್

2015- 16ರ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಬಿ.ಸಿ.ನಾಗೇಶ್

0

ಬೆಂಗಳೂರು(Bengaluru): 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದ್ದಾರೆ.

ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಪತ್ರಿಕೆಯಲ್ಲಿ ವರದಿ ಬಂದ ನಂತರ ನಾವು ಪ್ರಾಥಮಿಕ ತನಿಖೆ ನಡೆಸಿದಾಗ ಬೆಂಗಳೂರು ವಿಭಾಗದಲ್ಲಿ 16 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ.  ಮತ್ತಷ್ಟು ವಿಚಾರಣೆ ನಡೆಸಿದಾಗ 35 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದರು.

ರಾಜ್ಯಾದ್ಯಂತ ಈ ರೀತಿ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸಮಗ್ರ ತನಿಖೆ ನಡೆಸುತ್ತೇವೆ. ಇದು ಸಮಾಜವೇ ತಲೆತಗ್ಗಿಸುವ ಪ್ರಕರಣ ಈ ಹಗರಣ ಯಾರ ಕಾಲದಲ್ಲಿ ನಡೆದಿದೆ? ಯಾರೆಲ್ಲ ಭಾಗಿಯಾಗಿದ್ದಾರೆಂಬುದು ಗೊತ್ತಾಗಬೇಕು ಎಂದು ಆಗ್ರಹಿಸಿದರು.