ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2042 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 40,16,556ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಮತ್ತು ಕೋಲಾರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದು, ಆ ಮೂಲಕ ಸಾವಿನ ಸಂಖ್ಯೆ 40113ಕ್ಕೆ ಏರಿಕೆಯಾಗಿದೆ.
1,704ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,64,998ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 11,403 ಇದೆ.
ಬೆಂಗಳೂರಿನಲ್ಲಿ ಇಂದು 1039 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,42,299 ಕ್ಕೆ ಏರಿಕೆಯಾಗಿದೆ.