ಮನೆ ರಾಷ್ಟ್ರೀಯ ದೇಶದಲ್ಲಿ 20,528 ಮಂದಿಗೆ ಕೋವಿಡ್‌ ಪಾಸಿಟಿವ್‌

ದೇಶದಲ್ಲಿ 20,528 ಮಂದಿಗೆ ಕೋವಿಡ್‌ ಪಾಸಿಟಿವ್‌

0

ನವದೆಹಲಿ (New Delhi): ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 20,528 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 49 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,37,50,599ಕ್ಕೆ ಏರಿಕೆಯಾಗಿದೆ. ಆ ಪೈಕಿ 5,25,709 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 4,30,81,441 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,43,449 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 5.23 ರಷ್ಟಿದೆ.

ಪಶ್ಚಿಮ ಬಂಗಾಳದಲ್ಲಿ 30,613, ಕೇರಳದಲ್ಲಿ 24,645, ತಮಿಳುನಾಡಿನಲ್ಲಿ 17,228, ಮಹಾರಾಷ್ಟ್ರದಲ್ಲಿ 15,521, ಕರ್ನಾಟಕದಲ್ಲಿ 7,296 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಒಟ್ಟು 199.98 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಹಿಂದಿನ ಲೇಖನಪತ್ನಿಯ ಬಂಧನಕ್ಕೆ ಮುಂಚಿತವಾಗಿ ಜಾಮೀನಿಗೆ ಷರತ್ತಾಗಿ ಶರಣಾಗುವಂತೆ ನ್ಯಾಯಾಲಯವು ಪತಿಗೆ ನಿರ್ದೇಶಿಸಬಹುದೇ?
ಮುಂದಿನ ಲೇಖನಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ತಾನೂ ಗುಂಡು ಹಾರಿಸಿಕೊಂಡು ಮೃತಪಟ್ಟ ಯೋಧ