ಮನೆ ಉದ್ಯೋಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 207 ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 207 ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ

0

ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 207 ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 27 ರೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಬಹುದು.

Join Our Whatsapp Group

ಹುದ್ದೆಗಳ ವಿವರ

* ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ.

* ಅಂಗನವಾಡಿ ಕಾರ್ಯಕರ್ತೆಯರು : 80 ಹುದ್ದೆಗಳು

* ಅಂಗನವಾಡಿ ಸಹಾಯಕಿಯರು : 127 ಹುದ್ದೆಗಳು

* ಉದ್ಯೋಗ ಸ್ಥಳ : ಚಾಮರಾಜನಗರ (ಕರ್ನಾಟಕ)

ವಯಸ್ಸಿನ ಮಿತಿ:

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

* ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವಿದ್ಯಾರ್ಹತೆ ಹಾಗೂ ಆಯ್ಕೆ ಪ್ರಕ್ರಿಯೆ

* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು. (ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ/ದ್ವಿತೀಯ ಭಾಷೆಯನ್ನಾಗಿ ಓದಿರಬೇಕು).

* ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್ ಎಸ್ ಎಲ್ ಸಿ /ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

* ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುತ್ತಿರಬೇಕು.

* ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಅರ್ಜಿ ಶುಲ್ಕ:

* ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-11-2024.

* ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 27-11-2024.