ಮನೆ ರಾಜ್ಯ ರಾಜ್ಯದಲ್ಲಿ 222 ಮಂದಿಗೆ ಕೊರೊನಾ ಪಾಸಿಟಿವ್‌

ರಾಜ್ಯದಲ್ಲಿ 222 ಮಂದಿಗೆ ಕೊರೊನಾ ಪಾಸಿಟಿವ್‌

0

ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 222 ಮಂದಿಗೆ ಕೊರೊನಾ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,53,058ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. 191 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಸದ್ಯ 2,260 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 210 ಪ್ರಕರಣ ಪತ್ತೆಯಾಗಿದ್ದು, 171 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ ಸಕ್ರಿಯ ಪ್ರಕರಣಗಳ ಸಂಖ್ಯೆ 2,146 ಆಗಿದೆ. ಉಳಿದಂತೆ ಬಳ್ಳಾರಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕಲಬುರಗಿ, ತುಮಕೂರಿನಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದ್ದರೆ, ಚಿತ್ರದುರ್ಗದಲ್ಲಿ 2, ಉಡುಪಿಯಲ್ಲಿ 4 ಪ್ರಕರಣಗಳು ವರದಿಯಾಗಿವೆ. ಇತರೆ ರಾಜ್ಯಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

23,644 ಪರೀಕ್ಷೆ ನಡೆಸಲಾಗಿದ್ದು, ಒಟ್ಟಾರೇ ಟೆಸ್ಟ್ ಗಳ ಸಂಖ್ಯೆ 66,43,8011ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.93 ರಷ್ಟಿದ್ದು, ಮರಣ ಪ್ರಮಾಣ ಶೂನ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಹಿಂದಿನ ಲೇಖನಮೂಲೆ ನಿವೇಶನ ಹರಾಜು ಹಾಕಿ ಲಾಭ ಮಾಡಿಕೊಳ್ಳಲು ಬಿಡಿಎ ಖಾಸಗಿ ರಿಯಲ್‌ ಎಸ್ಟೇಟ್‌ ಕಂಪೆನಿ ಅಲ್ಲ: ಹೈಕೋರ್ಟ್‌
ಮುಂದಿನ ಲೇಖನಜೂನ್‌ 5 ಹವಾಮಾನ ವರದಿ