ಮನೆ ರಾಜ್ಯ ರಾಜ್ಯದಲ್ಲಿ 230 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 230 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 230 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,53,589ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40066 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

203 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,11,040ಕ್ಕೆ ಏರಿಕೆಯಾಗಿದೆ. ಇನ್ನು 2441 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 222 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,89,117ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನರಾಜಕೀಯ ಪಕ್ಷಗಳಲ್ಲಿ ವೈರತ್ವ ಇರಬಾರದು: ರಾಷ್ಟ್ರಪತಿ ರಾಮನಾಥ್ ಕೋವಿಂದ್
ಮುಂದಿನ ಲೇಖನಜೂನ್‌ 7ರ ರಾಶಿ ಭವಿಷ್ಯದ ವಿವರ