ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2,329 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,36,825ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,159ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 1,782ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,87,317ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 9307ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 1606 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,55,844ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ ಕೋವಿಡ್ ನಿಂದ ಒಬ್ಬರು ಮೃತಪಟ್ಟಿದ್ದಾರೆ.
Saval TV on YouTube