ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 241 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,51,739ಕ್ಕೆ ಏರಿಕೆಯಾಗಿದೆ.
ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. 98 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ,1.29 ರಷ್ಟಿದ್ದು, ಮರಣ ಪ್ರಮಾಣ ಶೂನ್ಯವಾಗಿದೆ. ರಾಜ್ಯದಲ್ಲಿ ಸದ್ಯ 2041 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದು 18,579 ಟೆಸ್ಟ್ ಮಾಡಲಾಗಿದ್ದು, ಇಲ್ಲಿಯವರೆಗೂ ಒಟ್ಟಾರೇ 66,33,2994 ಟೆಸ್ಟ್ ನಡೆಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಹೊಸದಾಗಿ 232 ಪ್ರಕರಣ ಪತ್ತೆಯಾಗಿದ್ದು, 93 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1943 ಸಕ್ರಿಯ ಪ್ರಕರಣಗಳಿವೆ. ಉಳಿದಂತೆ ಬೆಳಗಾವಿಯಲ್ಲಿ 2, ದಕ್ಷಿಣ ಕನ್ನಡದಲ್ಲಿ 4,ತುಮಕೂರಿನಲ್ಲಿ 3 ಪ್ರಕರಣ ಹೊರತುಪಡಿಸಿದರೆ ರಾಜ್ಯಾದ್ಯಂತ ಶೂನ್ಯ ಪ್ರಕರಣ ವರದಿಯಾಗಿದೆ.