ಬೆಂಗಳೂರು: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಬೆಂಗಳೂರಿನ ಹಲಸೂರು ಗೇಟ್ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ಮಂಗಳವಾರ (ಮಾರ್ಚ್.27) ರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ.
ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
199 ಎಲ್ಇಡಿ ಟಿವಿಗಳು ಜಪ್ತಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲ್ಯಾಂಕೋ ಟೋಲ್ ನಲ್ಲಿ ಚುನಾವಣಾ ಅಧಿಕಾರಿಗಳು 199 ಎಲ್ಇಡಿ ಟಿವಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಎಲ್ಇಡಿ ಟಿವಿಗಳು ಇಸ್ಲಾಂಪುರ ಗ್ರಾಮದ ಬಾಬುಜಾನ್ ಗೆ ಸೇರಿವೆ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.