ಮನೆ ರಾಜ್ಯ ಮಳೆ ನೀರು ನುಗ್ಗಿದ ಮನೆಯವರಿಗೆ 25 ಸಾವಿರ ರೂ. ಪರಿಹಾರ

ಮಳೆ ನೀರು ನುಗ್ಗಿದ ಮನೆಯವರಿಗೆ 25 ಸಾವಿರ ರೂ. ಪರಿಹಾರ

0

ಬೆಂಗಳೂರು (Bengaluru)- ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಶನಿವಾರದಿಂದಲೇ ಸಂತ್ರಸ್ತರ ಬ್ಯಾಂಕ್‌ ಖಾತೆಗೆ ನೇರವಾಗಿ ತಲಾ 25 ಸಾವಿರ ರೂ. ಪರಿಹಾರ ಮೊತ್ತ ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಶರತ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ನಗರದ 3,453 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಸಂತ್ರಸ್ತರಿಗೆ ತಲಾ 25 ಸಾವಿರ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆದೇಶಿಸಿದ್ದರು. ಅದರಂತೆ ಕಳೆದ ಮೂರು ದಿನಗಳಿಂದ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ನೀರು ನುಗ್ಗಿದ ಮನೆಗಳನ್ನು ಮಹಜರು ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳ ಪಡೆದಿದ್ದು, ಶನಿವಾರದಿಂದ ಪರಿಹಾರ ಮೊತ್ತವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಪೂರ್ವ ವಲಯದಲ್ಲಿ ಅತೀ ಹೆಚ್ಚು 714 ಮನೆಗಳು ಪ್ರವಾಹಕ್ಕೆ ತುತ್ತಾಗಿವೆ. ಬೊಮ್ಮನಹಳ್ಳಿ 147 ಮನೆಗಳಿಗೆ ಮಳೆ ನೀರು ನುಗ್ಗಿದೆ ತಲಾ ರೂ.25 ಸಾವಿರದಂತೆ 3,453 ಸಂತ್ರಸ್ತರಿಗೆ ಒಟ್ಟು ರೂ.8.63 ಲಕ್ಷ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.

ಹಿಂದಿನ ಲೇಖನವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು: ಸಿಎಂ ಬೊಮ್ಮಾಯಿ
ಮುಂದಿನ ಲೇಖನಗಣಪತಿ ಸಚ್ಚಿದಾನಂದ ಸ್ವಾಮೀಜಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ